ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಮೊಬೈಲ್ ಅಪ್ಲಿಕೇಷನ್ಗೆ ಗ್ರೀನ್ ಸಿಗ್ನಲ್
ಬೆಂಗಳೂರು; ಮನೆಯೊಡತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶೀಘ್ರದಲ್ಲೇ ಶುರುವಾಗಲಿದೆ. ಅದಕ್ಕಾಗಿ ವಿಶೇಷ ಮೊಬೈಲ್ ಅಪ್ಲಿಕೇಷನ್ ಒಂದು ರೆಡಿಯಾಗಿದೆ. ಆ ಅಪ್ಲಿಕೇಷನ್ಗೆ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
ಇಂದಿನ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಮೊಬೈಲ್ ಅಪ್ಲಿಕೇಷನ್ ಬಗ್ಗೆ ಚರ್ಚೆಯಾಗಿದ್ದು, ಈ ಯೋಜನೆ ಅನುಷ್ಠಾನ ಮಾಡುವ ಬಗ್ಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೊಬೈಲ್ ಅಪ್ಲಿಕೇಷನ್ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದರು. ಜೊತೆಗೆ ಸಂಪುಟ ಸಹೋದ್ಯೋಗಿಗಳಿಗೂ ಈ ಬಗ್ಗೆ ವಿವರಣೆ ಕೊಟ್ಟರು. ಅದಾದ ಬಳಿಕ ಮೊಬೈಲ್ ಅಪ್ಲಿಕೇಷನ್ ಬಳಕೆಗೆ ಅನುಮತಿ ನೀಡಲಾಗಿದೆ. ಆದ್ರೆ ಅರ್ಜಿ ಸಲ್ಲಿಕೆ ಶುರು ಯಾವತ್ತಿನಿಂದ ಅನ್ನೋದು ಇನ್ನೂ ಗೊತ್ತಾಗಬೇಕಿದೆ.