HealthInternationalNational

ಕೇಂದ್ರದಿಂದ ಕಟ್ಟುನಿಟ್ಟಿನ ಗೈಡ್‌ಲೈನ್ಸ್‌; ನೆಗೆಟಿವ್‌ ಬಂದರೂ ಕ್ವಾರಂಟೀನ್‌

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಇದರ ಜೊತೆಗೆ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್‌ ರೂಪಾಂತರ ವೈರಸ್‌ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಜಾರಿ ಮಾಡಿದೆ.

ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿಗಣ್ಣಿಡಲು ಸೂಚನೆ ನೀಡಲಾಗಿದೆ. ವಿದೇಶಗಳಿಂದ ಬರುವವರನ್ನು ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಪರೀಕ್ಷೆ ಮಾಡಬೇಕು. ಆರ್‌ಟಿಪಿಸಿಆರ್‌ ನೆಗೆಟಿವ್‌ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಬೇಕು. ಇನ್ನು ಹೈರಿಸ್ಕ್‌ ಇರುವ ದಕ್ಷಿಣ ಆಫ್ರಿಕಾ ಸೇರಿ 14 ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ಗಮನ ಇಡಲು ಸೂಚನೆ ನೀಡಲಾಗಿದೆ. ಈ 14 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದರೂ ಏಳು ದಿನ ಕ್ವಾರಂಟೀನ್‌ ಮಾಡಲಾಗುತ್ತದೆ. ಅನಂತರ 8ನೇ ದಿನ ಮತ್ತೊಮ್ಮೆ ಪರೀಕ್ಷೆ ಮಾಡಲಾಗುತ್ತದೆ. ಆಗಲೂ ನೆಗೆಟಿವ್‌ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಇನ್ನುಆರ್‌ಟಿಪಿಸಿಆರ್‌ ಟೆಸ್ಟ್‌ನಲ್ಲಿ ಪಾಸಿಟಿವ್‌ ಬಂದರೆ ಜಿನೋಮಿಕ್‌ ಸೀಕ್ವೆನ್ಸ್‌ಗೆ ಕಳುಹಿಸಲಾಗುತ್ತದೆ. ಪಾಸಿಟಿವ್‌ ಬಂದವರನ್ನು ಕ್ವಾರಂಟೀನ್‌ ಮಾಡಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

Share Post