BengaluruPolitics

ರಾಹುಲ್‌ ಗಾಂಧಿಗೆ ಕಾನೂನು ಸಂಕಷ್ಟ ಹಿನ್ನೆಲೆ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಭಟನೆ

ಬೆಂಗಳೂರು; ರಾಹುಲ್‌ ಗಾಂಧಿ ಸಂಸತ್‌ ಸದಸ್ಯತ್ವ ರದ್ದು ಮಾಡೋದ್ರ ಹಿಂದೆ ಬಿಜೆಪಿ ಪಿತೂರಿ ಅಡಗಿದೆ ಎಂದು ಆರೋಪಿಸಿ ಇಂದು ಸಂಜೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಶಾಸಕರು, ಸಚಿವರು ಪ್ರತಿಭಟನೆ ನಡೆಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. 

ಮೋದಿ ಉಪನಾಮದ ಬಗ್ಗೆ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದರು. ಈ ಸಂಬಂಧ ಸೂರತ್‌ ಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಹೈಕೋರ್ಟ್‌ ಮೊರೆಹೋಗಿದ್ದರು. ಆದ್ರೆ ಅಲ್ಲೂ ಕೂಡಾ ರಾಹುಲ್‌ಗೆ ಹಿನ್ನಡೆಯಾಗಿದೆ. ಇದರ ಹಿಂದೆ ಬಿಜೆಪಿ ಕುತಂತ್ರ ಅಡಿಗಿದೆ ಎಂಬುದು ಕಾಂಗ್ರೆಸ್‌ ಆರೋಪ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಬೋಸರಾಜ್, ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಎನ್ ಚಂದ್ರಪ್ಪ, ಶಾಸಕರಾದ ರಂಗನಾಥ್, ಶ್ರೀನಿವಾಸ್, ನಂಜೇಗೌಡ, ತನ್ವಿರ್ ಸೇಠ್, ಶಿವಣ್ಣ ಮತ್ತಿತರರು ಭಾಗವಹಿಸಿದ್ದರು.

Share Post