DistrictsPolitics

ಜಿಲ್ಲಾಧಿಕಾರಿ, ಜಿಪಂ ಸಿಇಒಗಳಿಗೆ ರೇಟ್‌ ಫಿಕ್ಸ್‌ ಮಾಡಲಾಗಿದೆ; ನಳಿನ್‌ ಕಟೀಲ್‌ ಆರೋಪ

ಬೆಳಗಾವಿ; ರಾಜ್ಯ ಸರ್ಕಾರ ಅಧಿಕಾರಿಗಳ ನೇಮಕದಲ್ಲಿ ರೇಟ್‌ ಫಿಕ್ಸ್‌ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಸಿಇಒಗಳು, ಕಮೀಷನರ್‌ಗಳು ಹೀಗೆ ಎಲ್ಲಾ ರೀತಿಯ ಹುದ್ದೆಗಳಿಗೆ ನೇಮಕಕ್ಕೆ ರೇಟ್‌ ಫಿಕ್ಸ್‌ ಮಾಡಲಾಗಿದೆ. ರೇಟ್‌ ಕುದರೋವರೆಗೂ ಯಾರ ನೇಮಕವೂ ಆಗಲ್ಲ ಎಂದು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಪೊಲೀಸ್‌ ಕಮೀಷನರ್‌ ನೇಮಕ ಆಗದೇ ಇರೋದು ನಾಚಿಕೆಗೇಡಿನ ಸಂಗತಿ ಎಂದಿರುವ ನಳಿನ್‌ ಕುಮಾರ್‌ ಕಟೀಲ್‌, ಹೀಗಾದ್ರೆ ಕಾನೂನು ಸುವ್ಯವಸ್ಥೆ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದ ಅಭಿವೃದ್ಧಿ ಹಾಗೂ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಕಡೆ ಚಿಂತನೆ ಮಾಡುವುದುದು ಬಿಟ್ಟು ವ್ಯವಹಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ನಮಗೆ 40 ಪರ್ಸೆಂಟ್‌ ಸರ್ಕಾರ ಎಂದು ಆರೋಪಿಸುತ್ತಿದ್ದರು. ಆದ್ರೆ ದಾಖಲೆ ಕೊಡಿ ಅಂದ್ರೆ ಕೊಡಲಿಲ್ಲ. ಈಗ ಕಾಂಗ್ರೆಸ್‌ 80 ಪರ್ಸೆಂಟ್‌ ಕಮೀಷನ್‌ ಹೊಡೆಯುತ್ತಿದೆ ಎಂದು ಆರೋಪಿಸಿದರು. ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆ ಅಂಗಡಿಗಳಲ್ಲಿ ಇಟ್ಟುಕೊಂಡಿದ್ದಾರೆ. ಇಂದು ಅಂಗಡಿಗಳ ವ್ಯಾಪಾರವಾಗಿದೆ ಎಂದೂ ದೂರಿದರು.

Share Post