BengaluruPolitics

ಜೈನ ಮುನಿ ಹತ್ಯೆ ಸಿಬಿಐಗೆ ವಹಿಸಲು ಆಗ್ರಹ; ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು; ಜೈನಮುನಿಯ ಹತ್ಯೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಜೈನಮುನಿ ಹತ್ಯೆಯನ್ನು ಇಬ್ಬರೇ ಮಾಡಿಲ್ಲ. ಇದರ ಹಿಂದೆ ಬಾರೆ ಯಾರದೂ ಕುತಂತ್ರ ಅಡಗಿದೆ. ವಿದೇಶಿ ಶಕ್ತಿಗಳ ಕೈವಾಡ ಇರುವ ಶಂಕೆ ಇದೆ ಎಂದು ಬಿಜೆಪಿ ಆರೋಪ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಜೈನಮುನಿ ಹತ್ಯೆ ಪ್ರಕರಣವನ್ನು ಇಡೀ ದೇಶವೇ ಖಂಡಿಸುತ್ತಿದೆ. ಇದರ ಹಿಂದೆ ಬೇರೆಯವರ ಕೈವಾಡ ಇದೆ ಎಂಬ ಅನುಮಾನಗಳಿವೆ. ಆದರೂ ರಾಜ್ಯ ಸರ್ಕಾರ ನಮ್ಮ ಪೊಲೀಸರಿಂದಲೇ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಕೊಲೆ ಮಾಡಿದವರು ಇಬ್ಬರೇ ಇರಬಹುದು. ಇವರಿಗೆ ಭಯೋತ್ಪಾದಕ ಶಕ್ತಿಗಳ ಕುಮ್ಮಕ್ಕು ಇರುವ ಅನುಮಾನ ಇದೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಆಗ್ರಹ ಮಾಡಿದ್ದಾರೆ.

Share Post