BengaluruCinemaCrime

ಮಾಸ್ಟರ್‌ ಆನಂದ್‌ ಪುತ್ರಿ ಹೆಸರಲ್ಲಿ ವಂಚನೆ; ಯುವತಿ ಅರೆಸ್ಟ್

ಬೆಂಗಳೂರು; ಕಿರುತೆರೆ ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರು ಬಳಸಿ ಯುವತಿಯೊಬ್ಬಳು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಿಶಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಕ್ಕಳ ಟ್ಯಾಲೆಂಟ್ ಶೋ, ಮಕ್ಕಳ ಮಾಡೆಲಿಂಗ್, ಇವೆಂಟ್ ಮ್ಯಾನೇಜ್‌ಮೆಂಟ್ ನಡೆಸುತ್ತೇನೆ ಎಂದು ಹೇಳಿ ಮಕ್ಕಳ ಪೋಷಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ನಿಶಾ ಪಡೆದಿದ್ದಳಂತೆ. ವಂಶಿಕಾ ಹೆಸರು ದುರ್ಬಳಕೆ ಮಾಡಿಕೊಂಡು ನಿಶಾ ಈ ಕೆಲಸ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

Share Post