BengaluruPolitics

ವಿಪಕ್ಷಗಳ ಮಹಾಮೈತ್ರಕೂಟ ಸಭೆ; ಯಾರೆಲ್ಲಾ ಪಾಲ್ಗೊಳ್ತಿದ್ದಾರೆ..?

ಬೆಂಗಳೂರು; ಲೋಕಸಭಾ ಚುನಾವಣೆಗೆ ವಿಪಕ್ಷಗಳು ಸಜ್ಜಾಗುತ್ತಿವೆ. ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಎಲ್ಲಾ ವಿರೋಧ ಪಕ್ಷಗಳು ಒಂದಾಗುವ ಚಿಂತನೆ ನಡೆಸುತ್ತಿವೆ. ಏನಾದರೂ ಮಾಡಿ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕೆಂದು ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಪಣ ತೊಟ್ಟಿವೆ. ಈ ನಿಟ್ಟಿನಲ್ಲಿ ಸಭೆಗಳು ನಡೆಸಲಾಗುತ್ತಿದೆ.

ಕೆಲ ದಿನಗಳ ಹಿಂದೆ ಬಿಹಾರದಲ್ಲಿ ಸಮಾನ ಮನಸ್ಕ ಪಕ್ಷಗಳ ಸಭೆ ನಡೆಸಲಾಗಿತ್ತು. ಇದರಲ್ಲಿ ಮಹಾ ಮೈತ್ರಿಕೂಟ ರಚನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದೀಗ ಮತ್ತೆ ಸಭೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ ಮಹಾ ಮೈತ್ರಿಕೂಟದ ಸಭೆ ನಡೆಯಲಿದೆ. ಸಭೆಯಲ್ಲಿ ಸುಮಾರು 24 ಪಕ್ಷಗಳು ಹಾಗೂ 49 ನಾಯಕರು ಭಾಗವಹಿಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಕೂಡಾ ಬೆಂಗಳೂರಿಗೆ ಬರುತ್ತಿದ್ದಾರೆ. ಇಬ್ಬರೂ ಎರಡು ದಿನದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉದ್ಧವ್‌ ಠಾಕ್ರೆ, ಹೇಮಂತ್‌ ಸೊರೇನ್‌, ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌, ಶರದ್‌ ಪವಾರ್‌ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

   ಈ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ, ಸೀಟು ಹಂಚಿಕೆ, ಪ್ರಧಾನಿ ಅಭ್ಯರ್ಥಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳ ಪಾಲಿಗೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಸಭೆ ಮಹತ್ವವೆನಿಸಿದೆ.
Share Post