BengaluruPolitics

ಇಂದಿನಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ; ಈ ದಾಖಲೆಗಳು ಇರಲೇಬೇಕು..!

ಬೆಂಗಳೂರು; ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಚಾಲನೆ ದೊರೆಯುತ್ತಿದೆ. ಅಂದರೆ ಇಂದಿನಿಂದ ಅರ್ಜಿ ಸಲ್ಲಿಕೆ ಮಾಡಬಹುದು. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇಂದು ಸಂಜೆ ಗೃಹಲಕ್ಷ್ಮೀ ಯೋಜನೆಯ ನೋಂದಣಿಗೆ ಚಾಲನೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಯ ಅರ್ಜಿಯನ್ನು ಬಿಡುಗಡೆ ಮಾಡಲಿದ್ದಾರೆ. ಇಂದು ಸಂಜೆಯಿಂದಲೇ ಅರ್ಜಿ ಸ್ವೀಕಾರ ಪ್ರಕ್ರಿಯೆ ಕೂಡಾ ಶುರುವಾಗಲಿದೆ.

ತಾವೇ ನೋಂದಣಿ ಮಾಡಿಕೊಳ್ಳೋದಕ್ಕೆ ಆಗೋದಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ಮಾತ್ರ ನೋಂದಣಿಗೆ ಅವಕಾಶ ನೀಡಲಾಗಿದೆ. ಗ್ರಾಮ ಒನ್‌, ಬಾಪೂಜಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಬಿಬಿಎಂಪಿ ವಾಋಡ್‌ ಕಚೇರಿ, ನಗರಾಡಳಿ ಸಂಸ್ಥೆಯ ಕಚೇರಿಗಳು, ಜೊತೆಗೆ ನೇಮಕ ಮಾಡಿ ಪ್ರಜಾಪ್ರತಿನಿಧಿಯಿಂದ ನೋಂದಣಿ ಮಾಡಿಸಬೇಕು ಎಂದು ಸರ್ಕಾರ ತಿಳಿಸಿದೆ.

ಫಲಾನುಭವಿಗಳಿಗೆ ಯಾವಾಗ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರವೇ ಸಮಯ ಹಾಗೂ ದಿನಾಂಕ ನಿಗದಿ ಮಾಡುತ್ತದೆ. ನಿಗದಿ ಮಾಡಿದ ಸಮಯಕ್ಕೆ ಬಂದು ಫಲಾನುಭವಿಗಳು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರೋದಿಲ್ಲ. ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು.

ಯಜಮಾನಿಗೆ ಮೊಬೈಲ್‌ಗೆ ಎಸ್‌ಎಂಸಿ ಕಳುಹಿಸಲಾಗುತ್ತದೆ. ಅದರಲ್ಲಿ ಯಾವ ಸಮಯಕ್ಕೆ ಎಲ್ಲಿ ನೋಂದಾಯಿಸಬೇಕು ಎಂದು ಮಾಹಿತಿ ಕಳುಹಿಸಲಾಗುತ್ತದೆ. ಅದನ್ನು ತೋರಿಸಿ ನಿಗದಿ ಮಾಡಿದ ಕೇಂದ್ರದಲ್ಲಿ ನೋಂದಾಯಿಸಬೇಕು. ಇದರಿಂದಾಗಿ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲುವುದು ತಪ್ಪುತ್ತದೆ. ನಿಗದಿತ ಸಮಯಕ್ಕೆ ಹೋಗಿ ನೋಂದಣಿ ಮಾಡಿಸಲು ಸಾಧ್ಯವಾಗದಿದ್ದಲ್ಲಿ ಸಂಜೆ ವೇಳೆ ಹೋಗಿ ನೋಂದಣಿ ಮಾಡಿಸಬುದು.

ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಬಹುದು, ಆದರೆ ಮಹಿಳೆಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಮಹಿಳೆ ಕೂಡಾ ತೆರಿಗೆ ಪಾವತಿದಾರಳಾಗಿರಬಾರದು, ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂಪಾಯಿ ಜಮೆಯಾಗುತ್ತದೆ, ಫಲಾನುಭವಿ ಇಚ್ಛೆ ವ್ಯಕ್ತಪಡಿಸಿದಲ್ಲಿ ಬೇರೆ ಖಾತೆ ನಂಬರ್‌ ನೀಡಬಹುದು. ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ನಂಬರ್‌ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿಕೊಳ್ಳಬೇಕು.

 

Share Post