National

ರಾಯಗಢದಲ್ಲಿ ಭಾರಿ ಮಳೆಗೆ ಭೂಕುಸಿತ; ಹತ್ತು ಮಂದಿ ದುರ್ಮರಣ

ಮುಂಬೈ; ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗ ಅವಾಂತರ ಶುರುವಾಗಿದೆ. ರಾಯಗಢ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ವೇಳೆ ಖಲಾಪುರದಲ್ಲಿ ಭೂಕುಸಿತ ಉಂಟಾಗಿ 30ಕ್ಕೂ ಹೆಚ್ಚು ಮನೆಗಳು ಅವಶೇಷಗಳಡಿ ಸಿಲುಕಿವೆ. ಈ ದುರಂತದಲ್ಲಿ ಸುಮಾರು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ನೂರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ರಾಯಗಢ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಭೂಕುಸಿತ ಉಂಟಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಇರ್ಸಾಲವಾಡಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದ್ದು, ಬೆಟ್ಟದ ಮೇಲಿರುವ ಹಳ್ಳಿಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲಿಗೆ ಹೋಗಲು ಯಾವುದೇ ಮಾರ್ಗವೂ ಇಲ್ಲ. ಒಂದು ವೇಳೆ ಈ ಪ್ರದೇಶ ತಲುಪಬೇಕಾದರೆ ಒಂದು ಕಿಲೋ ಮೀಟರ್‌ನಷ್ಟು ಟ್ರೆಕ್ಕಿಂಗ್‌ ಮಾಡಬೇಕಾಗುತ್ತದೆ.

ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

Share Post