ಮಣಿಪುರ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ ನಟಿ ರಶ್ಮಿಕಾ
ಮಣಿಪುರ; ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಪೈಶಾಚಿಕ ಕೃತ್ಯದಿಂದ ಇಡೀ ದೇಶ ಮಮ್ಮುಲ ಮರುಗುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಲಾಗುತ್ತಿದೆ. ಸಿನಿಮಾ ಮಂದಿ ಕೂಡಾ ಈ ಕೃತ್ಯವನ್ನು ಖಂಡಿಸುತ್ತಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕೆಂದು ಆಗ್ರಹ ಮಾಡಿದ್ದಾರೆ.
ನಾನು ಓದಿದ ಸುದ್ದಿ ಜನವೇ ಎಂದು ನಂಬೋದಕ್ಕೆ ಆಗುತ್ತಿಲ್ಲ. ಕ್ಷಮಿಸಿ, ನಮ್ಮ ದೇಶದಲ್ಲಿ ಏನು ನಡೆಯುತ್ತಿದೆ..? ಎಂದು ಪ್ರಶ್ನಿಸಿರುವ ರಶ್ಮಿಕಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.