ನಾನು ಸಿಎಂ ವಿರುದ್ಧ ಮಾತಾಡಿದ್ದು ನಿಜ, ಮಾತು ವಾಪಸ್ ಪಡೆಯಲ್ಲ; ಬಿ.ಕೆ.ಹರಿಪ್ರಸಾದ್
ಬೆಂಗಳೂರು; ನನಗೆ ಸಿಎಂ ಮಾಡೋದೂ ಗೊತ್ತು, ಕೆಳಗಿಳಿಸೋದೂ ಗೊತ್ತು ಎಂದು ನಿನ್ನೆ ಕಾರ್ಯಕ್ರಮವೊಂದರಲ್ಲಿ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದರು. ಈ ಬಗ್ಗೆ ಅವರು ಇವತ್ತು ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ನಿನ್ನೆ ನೀಡಿದ ಹೇಳಿಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ನಿನ್ನೆ ಏನು ಹೇಳಿದ್ದೇನೋ ಅದು ನಿಜ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದ್ರೆ ಆಡಿತ ಮಾತನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯೋದಿಲ್ಲ ಎಂದು ಹರಿಪ್ರಸಾದ್ ಹೇಳಿದ್ದಾರೆ. ಜೊತೆಗೆ ಅಸಮಾಧಾನದ ಬಗ್ಗೆ ನಾನು ಮಾತನಾಡೋದಿಲ್ಲ ಎಂದೂ ಹೇಳಿದ್ದಾರೆ. ನಿನ್ನೆ ನಡೆದ ಈಡಿಗ ಸಮುದಾಯದ ಸಭೆಯಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈಡಿಗ ಸಮುದಾಯವನ್ನು ರಾಜಕೀಯವಾಗಿ ಕಡೆಗಣಿಸುತ್ತಿರುವುದರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು.