InternationalLifestyle

ಅಮೆರಿಕದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ; ನಿರ್ಮಲಾನಂದ ಶ್ರೀ

ನ್ಯೂಯಾರ್ಕ್; ಅಮೆರಿಕದಲ್ಲಿ ಭಾರತೀಯರು ಹೆಚ್ಚಾಗಿ ಉದ್ಯೋಗ ಕಂಡುಕೊಂಡಿದ್ದಾರೆ. ಕನ್ನಡಿಗರು ಕೂಡಾ ಸಾಕಷ್ಟು ಜನ ಇದ್ದಾರೆ. ಹೀಗಾಗಿ ಇಲ್ಲಿ ಹಿಂದೂ ದೇವಾಲಯಗಳು ಕೂಡಾ ಇದೆ. ಇನ್ನು ಆದಿಚುಂಚನಗಿರಿ ಮಠದಿಂದಲೂ ಕಾಲಭೂರವೇಶ್ವರ ದೇಗುಲವನ್ನು ಕಟ್ಟಲಾಗುತ್ತಿದೆ. ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಈ ದೇಗುಲ ನಿರ್ಮಿಸಲಾಗುತ್ತಿದೆ ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ.

ಶ್ರೀ ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕ ಪ್ರವಾಸ ಕೈಗೊಂಡಿದ್ದು, ದೇಗುಲದ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಆದಿಚುಂಚನಗಿರಿ ಸಂಸ್ಥಾದಿಂದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ 20 ಎಕರೆ ಜಮೀನು ಖರೀದಿಸಲಾಗಿದೆ. ಇಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ 80 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಇನ್ನು ಇದೇ ಸ್ಥಳದಲ್ಲಿ 5000 ಚದರ ಮೀಟರ್‌ ವಿಸ್ತೀರ್ಣದಲ್ಲಿ ಯೋಗ, ಧ್ಯಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಯೋಜನೆ ಮಾಡಲಾಗುತ್ತದೆ.

ಮೊದಲ ಹಂತದಲ್ಲಿ ಇಲ್ಲಿ ಕಾಲಭೈರವೇಶ್ವರ ದೇವಾಲಯ, ಅರ್ಚಕರ ನಿವಾಸ ನಿರ್ಮಾಣ ಮಾಡಲಾಗುತ್ತದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ.

Share Post