CrimeNational

ಸಿಬಿಐ ತೂಗುಗತ್ತಿಯಿಂದ ತಪ್ಪಿಸಿಕೊಂಡು ಡಿಕೆಶಿ; ಸುಪ್ರೀಂನಿಂದಲೂ ರಿಲೀಫ್‌

ನವದೆಹಲಿ; ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಬಿಐ ಕಾನೂನು ಸಂಕಷ್ಟದಿಂದ ಪಾರಾಗಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದ್ರೆ ಸುಪ್ರೀಂ ಕೋರ್ಟ್‌ ಕೂಡಾ ಡಿ.ಕೆ.ಶಿವಕುಮಾರ್‌ ಪರವಾಗಿ ತೀರ್ಪು ನೀಡಿದೆ. ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶ ಮಾಡೋದಿಲ್ಲ ಎಂದು ಹೇಳುವ ಮೂಲಕ ಸಿಬಿಐ ಅರ್ಜಿಯನ್ನು ವಜಾ ಮಾಡಿದೆ.

2013ರಿಂದ 2018ರವರೆಗಿನ ಡಿ.ಕೆ.ಶಿವಕುಮಾರ್‌ ಅವರ ಆದಾಯ ಗಳಿಕೆ ಬಗ್ಗೆ ಸಿಬಿಐ ತನಿಖೆ ಕೈಗೊಂಡಿತ್ತು. ಇದಕ್ಕೆ ತಡೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಡಿ.ಕೆ.ಶಿವಕುಮಾರ್‌ ಅವರಿಗೆ ಆರಂಭಿಕ ಜಯ ಸಿಕ್ಕಿತ್ತು. ಫೆಬ್ರವರಿ 10ರಂದು ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿತ್ತು.

ಇದೀಘ ಸುಪ್ರೀಂ ಕೋರ್ಟ್‌ ಕೂಡಾ ಇದೇ ಆದೇಶವನ್ನು ಎತ್ತಿ ಹಿಡಿದಿದೆ. ನ್ಯಾ.ಬಿ.ಆರ್ ಗವಾವಿ, ನ್ಯಾ.ಸಿ.ಟಿ.ರವಿಕುಮಾರ್ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

Share Post