ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕೇಂದ್ರದೊಂದಿಗೆ ಚರ್ಚೆ; ಡಿ.ಕೆ.ಶಿವಕುಮಾರ್
ನವದೆಹಲಿ; ಬೆಂಗಳೂರು ನಗರದಲ್ಲಿ ನಾಲ್ಕೂ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ಇದರಿಂದಾಗಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಸಮಸ್ಯೆ ನಿವಾರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಇದಕ್ಕೆ ಅವರು ಸೂಕ್ತವಾಗಿ ಸ್ಪಂದಿಸಿದ್ದಾರೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಟನಲ್ ಅಥವಾ ಫ್ಲೈಓವರ್‌ಗಳ ನಿರ್ಮಾಣದ ಮೂಲಕ ರಾಷ್ಟ್ರೀಯ ಹೆದ್ದಾರಿಗಳಿಂದ ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ಬಗ್ಗೆ ಗಡ್ಕರಿ ಜೊತೆ ಚರ್ಚೆ ಮಾಡಿದ್ದೇವೆ. ಅವರೂ ಕೂಡಾ ಈ ಬಗ್ಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದರು.
ಈ ಸಂಬಂಧ ಡಿಟೇಲ್ಡ್ ಪ್ರಾಜೆಕ್ಟ್ ರಿಪೋರ್ಟ್ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈಗಾಗಲೇ ನಾವು ಪ್ರಪೋಸಲ್‌ಗಳನ್ನು ಕರೆದಿದ್ದೇವೆ. ಈಗಾಗಲೇ ಹಲವರು ತಮ್ಮ ಪ್ರಸೆಂಟೇಷನ್‌ಗಳನ್ನು ನೀಡಿದ್ದಾರೆ. ಇವತ್ತೂ ಕೂಡಾ ಸಿಂಗಾಪುರದವರು ಬಂದು ನನಗೆ ಪ್ರಸೆಂಟೇಷನ್‌ನ್ನು ನೀಡಿದ್ದಾರೆ. ಚೈನಾ, ಇಸ್ರೇಲ್‌ನವರು ಕೂಡಾ ಪ್ರಸೆಂಟೇಷನ್‌ಗಳನ್ನು ಕೊಟ್ಟಿದ್ದಾರೆ. ಅವರೆಲ್ಲರಿಗೂ ಪ್ರಪೋಸಲ್‌ಗಳನ್ನು ನೀಡೋದಕ್ಕೆ ಹೇಳಿದ್ದೇವೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯ ಸರ್ಕಾರವೂ ಸೇರಿಕೊಂಡು ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆ ಶ್ರಮ ವಹಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರಪೋಸಲ್‌ಗಳನ್ನು ಸಲ್ಲಿಸಲು ಆಗಸ್ಟ್ 8 ಕೊನೆಯ ದಿನಾಂಕವಾಗಿದೆ. ಅಷ್ಟರೊಳಗೆ ಬರುವ ಪ್ರಪೋಸಲ್‌ಗಳನ್ನು ನೋಡಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.