NationalPolitics

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ; ಇಂದು ಹೈಕಮಾಂಡ್‌ ಭೇಟಿ

ನವದೆಹಲಿ; ವಿಪಕ್ಷ ನಾಯಕನ ಸ್ಥಾನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಬಿಜೆಪಿಗೆ ಕಗ್ಗಂಟಾಗಿದೆ. ಹೊಸ ಸರ್ಕಾರ ರಚನೆಯಾಗಿ ಒಂದು ಅಧಿವೇಶನ ಮುಗಿದರೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ತಲೆ ಎತ್ತಿದ್ದರೆ, ಕಾಂಗ್ರೆಸ್‌ಗೆ ಇದೇ ಅಸ್ತ್ರವಾಗಿದೆ. ಈ ನಡುವೆ ವಿಪಕ್ಷ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಮುಂದುವರೆದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆಯಿಂದ ದೆಹಲಿಯಲ್ಲಿದ್ದಾರೆ. ನಿನ್ನೆ ಪೂರ್ತಿ ಪ್ರಯತ್ನಪಟ್ಟರೂ ಹೈಕಮಾಂಡ್‌  ನಾಯಕರ ಭೇಟಿಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಇಂದು ಬೊಮ್ಮಾಯಿಯವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.

ನಿನ್ನೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಹಲವು ಮಸೂದೆಗಳನ್ನು ಮಂಡನೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಲ್ಲರೂ ಅದರಲ್ಲಿ ಬ್ಯುಸಿಯಾಗಿದ್ದರಿಂದ ಯಾರನ್ನೂ ಭೇಟಿಯಾಗಲು ಆಗಿರಲಿಲ್ಲ. ಆದ್ರೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ಭೇಟಿಗೆ ಬೊಮ್ಮಾಯಿ ಸಮಯ ಕೇಳಿದ್ದಾರೆ. ಅವರು ಭೇಟಿಗೆ ಅವಕಾಶ ಕೊಟ್ಟರೆ ಇಂದು ಬೊಮ್ಮಾಯಿಯವರು ಅವರೊಂದಿಗೆ ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯಾಧ್ಯಕ್ಷರ ನೇಮಕ ಸಂಬಂಧ ಮಾತುಕತೆ ನಡೆಸಲಿದ್ದಾರೆ.

Share Post