BengaluruPolitics

ನನಗೆ ಬ್ಲ್ಯಾಕ್‌ಮೇಲ್‌ ಮಾಡಲು ಬರಬೇಡಿ; ಗುತ್ತಿಗೆದಾರರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು; ಗುತ್ತಿಗೆದಾರರಿಗೆ ನೀಡಬೇಕಾದ ಹಣ ನೀಡಲು ಕಮೀಷನ್‌ ಕೇಳುತ್ತಿದ್ದಾರೆ ಎಂದು ಕೆಲ ಬಿಬಿಎಂಪಿ ಗುತ್ತಿಗೆದಾರರು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್‌ ಖಡಕ್‌ ಉತ್ತರ ಕೊಟ್ಟಿದ್ದಾರೆ. ನನಗೆ ಬ್ಲ್ಯಾಕ್‌ ಮೇಲ್‌ ಮಾಡೋದಕ್ಕೆ ಬರಬೇಡಿ. ನನಗೆ ಥ್ರೆಟ್‌ ಮಾಡಿದರೆ ನಾನು ಕೇಳೋದಿಲ್ಲ. ಎಂಥದ್ದೇ ಒತ್ತಡ ಬಂದರೂ ನಿಭಾಯಿಸಲು ನಾನು ರೆಡಿ ಎಂದಿದ್ದಾರೆ.

ಕಾಮಗಾರಿ ಪೂರ್ತಿ ಮಾಡಿದ್ದರೂ ಬಿಲ್‌ ಪಾವತಿ ಮಾಡುತ್ತಿಲ್ಲ ಎಂದು ಗುತ್ತಿಗೆದಾರರು ಆರೋಪ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಕೆಲವು ಬಿಲ್‌ಗಳ ಬಗ್ಗೆ ನಮಗೆ ಅನುಮಾನ ಇದೆ. ಕಾಮಗಾರಿ ಮಾಡದೆ ಬಿಲ್‌ ಮಾಡಿರುವ ಬಗ್ಗೆ ನಮಗೆ ಅನುಮಾನಗಳಿವೆ. ಹೀಗಾಗಿ ತನಿಖೆ ಮಾಡಿಸುತ್ತಿದ್ದೇವೆ. ಕೆಲಸ ಮಾಡಿದರೆ ಹಣ ಬಿಡುಗಡೆಯಾಗುತ್ತದೆ. ಕೆಲಸ ಮಾಡಿಲ್ಲ ಅಂದ್ರೆ ಹಣ ಇಲ್ಲ ಎಂದು ಖಡಕ್ಕಾಗಿ ಹೇಳಿಬಿಟ್ಟಿದ್ದಾರೆ.

ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳಲ್ಲಿ ಹಣ ಬಿಡುಗಡೆಯಾಗಿಲ್ಲ. ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಹಣ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಕೆಲವು ಕಡೆ ಕಾಮಗಾರಿಯೇ ನಡೆಯದೇ ಬಿಲ್‌ ಮಾಡಲಾಗಿದೆ ಎಂದು ಅನುಮಾನವಿದೆ. ಈ ಹಿನ್ನೆಲೆಯಲ್ಲಿ ತನಿಖೆ ಮಾಡಿಯೇ ಬಿಲ್‌ ಬಿಡುಗಡೆ ಮಾಡಲಾಗುತ್ತದೆ. ಕೆಲಸ ಮಾಡಿದ್ದರೆ ಹಣ ಸಿಗುತ್ತದೆ. ಅದು ಬಿಟ್ಟು ಕೆಲಸ ಮಾಡದೇ ಬ್ಲ್ಯಾಕ್‌ ಮಾಡಿದರೆ ನಾನು ಕೇಳೋದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ.

 

Share Post