ಅನಧಿಕೃತ ಫ್ಲೆಕ್ಸ್ ಹಾಕಿದರೆ 50 ಸಾವಿರ ರೂಪಾಯಿ ದಂಡ; ಡಿ.ಕೆ.ಶಿವಕುಮಾರ್
ಬೆಂಗಳೂರು; ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಹಾಕಿದರೆ 50 ಸಾವಿರ ರೂಪಾಯಿ ದಂಡ ಹಾಕಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನಮತಿ ಇಲ್ಲದೆ ಫ್ಲೆಕ್ಸ್ ಹಾಕಿದ್ದು ಕಂಡುಬಂದಲ್ಲಿ ಫ್ಲೆಕ್ಸ್ ಹಾಕಿದವರಿಗೂ ಹಾಗೂ ಬಿಬಿಎಂಪಿಯವರಿಗೂ ದಂಡ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.
ಅನುಮತಿ ಪಡೆದೇ ನಿಗದಿಪಡಿಸಿದ ಜಾಗದಲ್ಲಿ ಫ್ಲೆಕ್ಸ್ ಹಾಕಬೇಕು. ಒಂದು ವೇಳೆ ನಗರದಲ್ಲಿ ಅನುಮತಿ ಪಡೆಯದೇ ಫ್ಲೆಕ್ಸ್ ಹಾಕಿದರೆ ಅದು ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ಅನಧಿಕೃತ ಫ್ಲೆಕ್ಸ್‌ಗೆ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಜೊತೆಗೆ ಬಿಬಿಎಂಪಿ ಅಧಿಕಾರಿಗಳಿಗೂ ದಂಡ ವಿಧಿಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸೌಂದರ್ಯ ಕಾಪಾಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಹೊಸದೊಂದು ನಿಯಮವನ್ನೇ ತರುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.