BengaluruCrime

ರಾಜ್ಯಪಾಲರಿಗೆ ದೂರು ವಿಚಾರ; ಇಬ್ಬರನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಬೆಂಗಳೂರು; ಕೃಷಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ನೀಡಿರುವ ಸುಳ್ಳು ದೂರಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಮೈಸೂರಿನ ಪೋಸ್ಟ್‌ ಆಫೀಸ್‌ ಬಳಿಯಿಂದ ಆ ಪತ್ರವನ್ನು ಪೋಸ್ಟ್‌ ಮಾಡಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಕೃಷಿ ಇಲಾಖೆಗೆ ಸೇರಿದ ಇಬ್ಬರು ನೌಕರರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಿಐಡಿ ಅಧಿಕಾರಿಗಳು ಇಬ್ಬರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗಿದೆ. ಇತ್ತೀಚೆಗೆ ರಾಜ್ಯಪಾಲರಿಗೆ ಪತ್ರವೊಂದು ಬಂದಿತ್ತು. ಅದರಲ್ಲಿ ಮಂಡ್ಯ ಜಿಲ್ಲೆ ಎಲ್ಲಾ ಸಹಾಯಕ ಕೃಷಿ ಅಧಿಕಾರಿಗಳು ಸಹಿ ಇತ್ತು. ಸಚಿವ ಚಲುವರಾಯಸ್ವಾಮಿಯವರು ಪ್ರತಿ ಅಧಿಕಾರಿಯಿಂದ ಎಂಟರಿಂದ ಹತ್ತು ಲಕ್ಷ ರೂಪಾಯಿ ಲಂಚ ಕೇಳಿದ್ದಾರೆ. ಅವರು ವಿರುದ್ಧ ಕ್ರಮ ಕೈಗೊಳ್ಳುವಂತೆ ಅದರಲ್ಲಿ ಬರೆಯಲಾಗಿತ್ತು. ಆದ್ರೆ ಅಧಿಕಾರಿಗಳು ಇದನ್ನು ಅಲ್ಲಗೆಳೆದಿದ್ದಾರೆ. ನಾವು ಈ ಪತ್ರವನ್ನೇ ಬರೆದಿಲ್ಲ ಎಂದಿದ್ದಾರೆ.

ಪತ್ರ ಸುಳ್ಳು ಎಂಬ ಆರೋಪ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ. ಅಧಿಕಾರಿಗಳು ನಿನ್ನೆಯಿಂದ ತನಿಖೆ ಚುರುಕುಗೊಳಿಸಿದ್ದಾರೆ.

Share Post