DistrictsHealth

ಲೋ ಬಿಪಿಯಾಗಿ ನರ್ಸಿಂಗ್‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಮಂಗಳೂರು; ಇತ್ತೀಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿವೆ. ಚಿಕ್ಕ ವಯಸ್ಸಿನಲ್ಲೇ ಹೃದಯಘಾತಗಳು ಸಂಭವಿಸುತ್ತಿವೆ. ಮಹಿಳೆಯರಿಗೆ ಹೃದಯಾಘಾತಗಳು ಅಪರೂಪ ಎಂದು ಹೇಳಲಾಗಿತ್ತು. ಆದ್ರೆ ಇತ್ತೀಚೆಗೆ ಮಹಿಳೆಯರಿಗೇ ಹೆಚ್ಚು ಹೃದಯಾಘಾತಗಳಾಗುತ್ತಿದೆ. ಸ್ಪಂದನಾ ವಿಜಯ್‌ ರಾಘವೇಂದ್ರ ನಂತರ ಚಾಮರಜಾನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಳು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ನೆರಿಯದಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್‌ ಓದುತ್ತಿದ್ದ ಸುಮಾ ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ. ಆಗಸ್ಟ್‌ 9ರಂದು ಆಕೆಗೆ ಅನಾರೋಗ್ಯ ಉಂಟಾಗಿತ್ತು. ಈ ಕಾರಣದಿಂದಾಗಿ ಈಕೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದಳು. ಆದ್ರೆ ಆಗಸ್ಟ್‌ 13ರಂದು ಸಂಜೆ ಮತ್ತೆ ಅಸ್ವಸ್ಥಳಾಗಿದ್ದಾಳೆ. ಲೋ ಬಿಪಿ ಆಗಿದ್ದರಿಂದ ತೀವ್ರ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತು. ಆದ್ರೆ, ಆಕೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ.

Share Post