BengaluruPolitics

ರಾಜ್ಯದಲ್ಲಿ ಎನ್‌ಇಪಿ ರದ್ದು, ಹೊಸ ಪಾಲಿಸಿ ರಚನೆಗೆ ಸಮಿತಿ; ಡಿ.ಕೆ.ಶಿವಕುಮಾರ್

ಬೆಂಗಳೂರು; ರಾಜ್ಯದಲ್ಲಿ ಎನ್‌ಇಪಿ ರದ್ದು ಮಾಡಿ, ರಾಜ್ಯ ಶಿಕ್ಷಣ ನೀತಿಯನ್ನೇ ಮರು ಜಾರಿ ಮಾಡುತ್ತೇವೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಎನ್‌ಇಪಿ ರದ್ದು ಕುರಿತು ನಡೆದ ವಿವಿ ಕುಲಪತಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆ ಬಳಿಕ ಅವರು ಮಾತನಾಡಿದರು.

ಇಂದಿನ ಸಭೆಯಲ್ಲಿ ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇವೆ. ಜೊತೆಗೆ ಎನ್‌ಇಪಿ ಸಾಧಕ-ಬಾಧಕಗಳ ಬಗ್ಗೆಯೂ ಮಾತನಾಡಿದ್ದು, ಅಧಿಕಾರಿಗಳಿಂದಲೂ ಅಭಿಪ್ರಾಯ ಸಂಗ್ರಹಿಸಿದ್ದೇವೆ.  ನಮ್ಮ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಎನ್‌ಇಪಿಯನ್ನ ತರಾತುರಿಯಲ್ಲಿ ಕರ್ನಾಟಕದಲ್ಲಿ ಜಾರಿ ಮಾಡಲಾಯ್ತು. ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ರಾಜ್ಯದಲ್ಲಿ ಕೂಡಾ ಎನ್‌ಇಪಿ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ನಮ್ಮ ರಾಜ್ಯದಲ್ಲಿ ಎನ್‌ಇಪಿ ರದ್ದು ಮಾಡುತ್ತಿದ್ದೇವೆ. ಹೊಸ ಪಾಲಿಸಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ ಎಂದೂ ಡಿಕೆಶಿ ಹೇಳಿದರು.

Share Post