Bengaluru

ದೆಹಲಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತೀರ್ಮಾನ; ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದ ಜಲ ವಿವಾದಗಳನ್ನು ಪರಿಸುವುದಕ್ಕಾಗಿ ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವಪಕ್ಷ ಸಭೆ ಬಳಿಕ ಮಾತನಾಡಿದ ಅವರು, ಕಾವೇರಿ, ಮೇಕೆದಾಟು, ಭದ್ರಾ ಮೇಲ್ದಂಡೆ, ಮಹದಾಯಿ ವಿಚಾರವಾಗಿ ಚರ್ಚೆ ಮಾಡಲು ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ಹೋಗುತ್ತೇವೆ. ಇದಕ್ಕೆ ಎಲ್ಲಾ ಪಕ್ಷಗಳ ನಾಯಕರೂ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.

ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರು, ಕೇಂದ್ರ ಪರಿಸರ ಸಚಿವರನ್ನು ಭೇಟಿಯಾಗಲಿದೆ. ಮೇಕೆದಾಟು ಯೋಜನೆಗೆ ಅರಣ್ಯ ಪ್ರದೇಶದ ಕ್ಲಿಯರೆನ್ಸ್ ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆಗಸ್ಟ್‌ ಕೊನೆಯ ವೇಳೆ ಕೆಆರ್‌ಎಸ್‌ನಿಂದ ಒಟ್ಟು 86.38 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕಾಗಿತ್ತು. ಆದ್ರೆ ಜೂನ್‌ನಲ್ಲಿ ರಾಜ್ಯದಲ್ಲಿ ಮಳೆಯ ಕೊರತೆಯಾಗಿತ್ತು. ಜುಲೈನಲ್ಲಿ ಮಳೆ ಬಂತು, ಹೀಗಾಗಿ ಜುಲೈನಲ್ಲಿ 8.74 ಟಿಎಂಸಿ ಹಾಗೂ ಆಗಸ್ಟ್‌ನಲ್ಲಿ 26 ಟಿಎಂಸಿ ನೀರು ಬಿಟ್ಟಿದ್ದೇವೆ. ಜೂನ್‌ನಲ್ಲಿ ಕೂಡಾ ಎರಟು ಟಿಎಂಸಿ ನೀರು ಬಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಈಗ ಮಳೆಯ ಕೊರತೆ ಇದೆ. ಡ್ಯಾಮ್‌ಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಈಗ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Share Post