BengaluruScience

ಆ.23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ‌ ಆಚರಣೆ; ಮೋದಿ

ಬೆಂಗಳೂರು; ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಸ್ರೋ ವಿಜ್ಞಾನಿಗಳ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮಾತನಾಡಿರುವ ಅವರು,  ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ತಿಳಿಸಿದರು. ಪ್ರತಿ ವರ್ಷ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.

ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಹಾಡಿಹೊಗಳಿದ ಮೋದಿ, ವಿಕ್ರಂ ಲ್ಯಾಂಡರ್‌ ಇಳಿದ ಜಾಗವನ್ನು ಶಿವಶಕ್ತಿ ಪಾಯಿಂಟ್‌ ಎಂದು ಮೋದಿ ನಾಮಕರಣ ಮಾಡಿದ್ದಾರೆ. ಚಂದ್ರಯಾನ-೨ ಇಳಿದ ಜಾಗಕ್ಕೆ ತಿರಂಗ ಪಾಯಿಂಟ್‌ ಎಂದು ಹೇಳಿದ್ದಾರೆ.

ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ. ಹೀಗಾಗಿ ಆಗಸ್ಟ್​ 23ರಂದು ರಾಷ್ಟ್ರೀಯ ಬಾಹ್ಯಾಕಾಶ​ ದಿನ ಎಂದು ಘೋಷಣೆ ಮಾಡಲಾಗುವುದು ಎಂದು ಮೋದಿ ಹೇಳಿದರು.

Share Post