ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ
ಮೈಸೂರು; ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಉದ್ಘಾಟಿಸಲು ಹಂಸಲೇಖ ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು.
ಸಿಎಂ ಹಾಗೂ ಡಿಸಿಎಂ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿಗೆ ಹರಕೆ ತೀರಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.