DistrictsHealth

ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಳಗಾವಿ; ಮದುವೆ ಊಟ ಸೇವಿಸಿದ್ದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ಮದುವೆ ಸಮಾರಂಭ ನಡೆದಿದ್ದು, ಇದರಲ್ಲಿ ಊಟ ಸೇವಿಸಿವರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಪಟೇಲ್‌ ಕುಟುಂಬದ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಇದಕ್ಕೆ ಮಹಾರಾಷ್ಟ್ರದ ಮೀರಜ್‌ನಿಂದಲೂ ಸಂಬಂಧಿಕರು ಆಗಮಿಸಿದ್ದರು. ಎಲ್ಲರೂ ಮದುವೆ ಮುಗಿಸಿ ಊಟ ಮಾಡಿ ಮನೆಗೆ ವಾಪಸ್ಸಾಗಿದ್ದಾರೆ. ಈ ವೇಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಸುಮಾರು ನೂರಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿಯಾಗಿದೆ. ಇದರಿಂದಾಗಿ ಎಲ್ಲರೂ ಅವರಿಗೆ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಈ ಮಾಹಿತಿ ತಿಳಿದ ಆರೋಗ್ಯ ಇಲಾಖೆ ಅಧಿಕಾರಿಗಳು ಹಿರೇಕೋಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

 

Share Post