CrimeDistricts

ಮಡಿಕೇರಿಯಲ್ಲಿ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು

ಕೊಡಗು; ಮಂಡ್ಯ ಮೂಲದ ಯುವ ಮಹಿಳಾ ಅರಣ್ಯಾಧಿಕಾರಿಯೊಬ್ಬರು ಕೊಡಗು ನಗರದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಇಲ್ಲಿನ ಅರಣ್ಯ ಇಲಾಖೆ ವಸತಿಗೃಹದಲ್ಲಿ ನೇಣುಬಿಗಿದುಕೊಂಡು ಮಹಿಳಾ ಅರಣ್ಯಾಧಿಕಾರಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

27 ವರ್ಷದ ರಶ್ಮಿ ಅರಣ್ಯ ಇಲಾಖೆಯಲ್ಲಿ DRFO ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳಿಂದ ಕೊಡಗಿನಲ್ಲಿಯೇ ಕೆಲಸ ಮಾಡುತ್ತಿದ್ದ ಅವರು, ಯಾಕೆ ಆತ್ಮಹತ್ಯೆ ಮಾಡಿಕೊಂಡರು ಅನ್ನೋದು ಇನ್ನೂ ಗೊತ್ತಾಗಿಲ್ಲ. ಕಳೆದ ರಾತ್ರಿಯೇ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ವಿಷಯ ಗೊತ್ತಾಗಿದೆ. ಮಡಿಕೇರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share Post