ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಪ್ರಕರಣ; ಇದು ಆಕಸ್ಮಿಕ ಅಲ್ಲ, ಹಚ್ಚಿದ್ದು..?
ಬೆಂಗಳೂರು; ಇತ್ತೀಚೆಗೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದ್ರೆ ಬೆಂಕಿ ಅವಘಡಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಮೊದಲು ಹೇಳಲಾಗಿತ್ತಾದರೂ, ಘಟನೆ ಬಗ್ಗೆ ಸದ್ಯ ಅನುಮಾನಗಳು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಧುರೈನಲ್ಲಿ ನಡೆದ ಅನಾಹುತ ಸೇರಿ ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಹತ್ತು ದಿನಗಳ ಹಿಂದೆ ಈ ಘಟನೆ ಮುಂಬೈನಿಂದ ಬಂದಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ನಿಂತಿತ್ತು. ಈ ವೇಳೆ ಬೆಂಕಿ ತಗುಲಿ, ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿದ್ದವು. ಆದ್ರೆ ಇದಕ್ಕೆ ಇದುವರೆಗೂ ನಿಖರ ಕಾರಣ ಗೊತ್ತಾಗಿಲ್ಲ. ಪ್ರಕರಣದ ಹಿಂದೆ ಕಿಡಗೇಡಿಗಳ ಕೈವಾಡ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
ರೈಲಿನಲ್ಲಿ ಅದರಲ್ಲೂ ಬೆಂಕಿ ಬಿದ್ದ ಬೋಗಿಯಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು ಯಾರು..? ಬೋಗಿಯಲ್ಲಿ ಟೆಕ್ನಿಕಲ್ ಸಮಸ್ಯೆ ಏನಾದರೂ ಆಗಿತ್ತಾ? ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಕೂಡಾ ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.