NationalPolitics

ತಮಿಳುನಾಡು ದಿನಕ್ಕೆ 24 ಸಾವಿರ ಕ್ಯೂಸೆಕ್‌ ನೀರು ಕೇಳಿತ್ತು; ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ; ತಮಿಳುನಾಡು ಸರ್ಕಾರ ದಿನಕ್ಕೆ 24 ಸಾವಿರ ಕ್ಯೂಸೆಕ್‌ ನೀರು ಕೇಳಿತ್ತು. ಆದ್ರೆ ಕಾವೇರಿ ನೀರು ನಿರ್ವಹಣಾ ಸಮಿತಿ ಮುಂದೆ ನಮ್ಮ ಅಧಿಕಾರಿಗಳು ಹೋರಾಟ ಮಾಡಿ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಸಮಿತಿ 5 ಸಾವಿರ ಕ್ಯೂಸೆಕ್‌ಗೆ ಸೀಮಿತ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕಾವೇರಿ ವಿವಾದದ ಬಗ್ಗೆ ಚರ್ಚೆ ಮಾಡಲು ದೆಹಲಿಗೆ ಬಂದಿರುವ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇದೆ. ಅದಕ್ಕೆ ಪೂರಕವಾಗಿ ಸಾಧಕ ಬಾಧಕಗಳನ್ನು ಚರ್ಚೆ ಮಾಡಿದ್ದೇವೆ. ಕರ್ನಾಟಕದ ಪರ ವಕೀಲ ಶ್ಯಾಮ್‌ ದಿವಾನ್‌ ಅವರನ್ನೂ ಭೇಟಿಯಾಗಿ ಮಾತುಕತೆ ಮಾಡುತ್ತೇನೆ. ವಕೀಲರು ಏನು ಹೇಳುತ್ತಾರೋ ಅದರ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಕಾವೇರಿ ನದಿ ನೀರು ವಿವಾದಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆ ಜಾರಿ ಮಾಡೋದರಿಂದಾಗಿ ತಮಿಳುನಾಡಿಗೂ ಕೂಡಾ ಸಾಕಷ್ಟು ಅನುಕೂಲ ಇದೆ. ಹೀಗಾಗಿ ವಾಸ್ತವಾಂಶವನ್ನು ನೇರವಾಗಿ ಬಂದು ನೋಡಬೇಕು. ತಜ್ಞರು, ಕಾವೇರಿ ಸಮಿತಿ ಹಾಗೂ ಪ್ರಾಧಿಕಾರ ಸ್ಥಳ ಪರಿಶೀಲನೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ.

Share Post