NationalScience

ಆದಿತ್ಯ-ಎಲ್‌1 ಯಶಸ್ವಿ ಉಡಾವಣೆ ಹಿನ್ನೆಲೆ; ವಿಜ್ಞಾನಿಗಳನ್ನು ಅಭಿನಂದಿಸಿದ ಮೋದಿ

ನವದೆಹಲಿ; ಭಾರತದ ಮೊದಲ ಸೌರ ಮಿಷನ್‌ ಆದಿತ್ಯ-ಎಲ್‌1 ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ಸಂಸ್ಥೆಯಿಂದ ಪಿಎಸ್‌ಎಲ್‌ವಿ ರಾಕೆಟ್‌ ಮೂಲಕ ಆದಿತ್ಯ-ಎಲ್‌೧ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. 

ಮೋದಿ ಟ್ವೀಟ್‌ನಲ್ಲಿ ಏನಿದೆ..?

ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಭಾರತದ ಮೊದ ಸೌರ ಮಿಷನ್‌ ಆದಿತ್ಯ-ೆಲ್‌೧ನ ಯಶಸ್ವಿಯ ಉಡಾವಣೆಗಾಗಿ ಇಸ್ರೋನ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳನ್ನು ಅಭಿನಂದಿಸುತ್ತೇನೆ. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ. ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮೋದಿ ಹೇಳಿದ್ದಾರೆ.

Share Post