ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್
ಲಕ್ನೋ; ಸನಾತನ ಧರ್ಮದ ಬಗ್ಗೆ ಟೀಕೆ ಮಾಡಿದ್ದ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಎಫ್ಐಆರ್ ಮಾಡಲಾಗಿದೆ.
ವಕೀಲರಾದ ಹರ್ಷಗುಪ್ತ ಹಾಗೂ ರಾಮ್ಸಿಂಗ್ ಲೋಧಿ ಎಂಬುವವರು ಈ ಕೇಸ್ ದಾಖಲಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದರು. ಈ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿದೆ.