BengaluruPolitics

ಸಿಎಂ ನೇತೃತ್ವದಲ್ಲಿ ಅನುಸೂಚಿತ ಜಾತಿ-ಬುಡಕಟ್ಟುಗಳ ಜಾಗೃ ಸಭೆ

ಬೆಂಗಳೂರು; ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆಯು ಇಂದು‌ ವಿಧಾನಸೌಧಧ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ‌ ಎಸ್.ಸಿ / ಎಸ್.ಟಿ ಗಳ ಮೇಲಿನ‌ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಯಿತು. ನೊಂದ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ, ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿದೆಯಾ..?, ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಕಾರಣಗಳು, ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.

Share Post