BengaluruPolitics

ಹೈಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ರಿಲೀಫ್‌

ಬೆಂಗಳೂರು; ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಿಲೀಫ್‌ ಸಿಕ್ಕಿದೆ. ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ ಸಂಬಂಧ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌  ಪುರಸ್ಕರಿಸಿದ್ದು, ಕೇಸ್‌ ವಿಚಾರಣೆಗೆ ಮಧ್ಯಂತರ ತಡೆ ನೀಡಲಾಗಿದೆ.

ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರದ  ವೇಳೆ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನ ಸಚಿವ ಈಶ್ವರಪ್ಪ ವಿರುದ್ಧ ನಲವತ್ತು ಪರ್ಸೆಂಟ್‌ ಕಮೀಷನ್‌ ಆರೋಪ ಮಾಡಿ ಸಂತೋಷ್‌ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ನಾಯಕರು ಯತ್ನಿಸಿದ್ದರು.

ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್‌ ಪೊಲೀಸರು ಸಿದ್ದರಾಮಯ್ಯ ಹಾಗೂ ಇತರ ನಾಯಕರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು.

 

Share Post