National

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ; ಇಂದು ಕಾವೇರಿ ಪ್ರಾಧಿಕಾರದಲ್ಲಿ ಮಹತ್ವದ ಸಭೆ

ಮಂಡ್ಯ; ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ 15 ದಿನಗಳ ಕಾಲ ದಿನಕ್ಕೆ 5 ಸಾವಿರ ಕ್ಯೂಸೆಕ್‌ ನೀರು ಬಿಡಬೇಕೆಂದು ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಅದನ್ನು ರೈತರ ವಿರೋಧದ ನಡುವೆಯೂ ಕರ್ನಾಟಕ ಸರ್ಕಾರ ಪಾಲಿಸಿದೆ. ಹದಿನೈದು ದಿನಗಳಲ್ಲಿ ದಿನಕ್ಕೆ 5 ಸಾವಿರ ಕ್ಯೂಸೆಕ್‌ನಂತೆ 75 ಸಾವಿರ ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ಹೀಗಿದ್ದರೂ ತಮಿಳುನಾಡು ಇನ್ನೂ ಹತ್ತು ದಿನಗಳ ಕಾಲ 24000 ಕ್ಯೂಸೆಕ್‌ ನೀರು ಬೇಕು ಎಂದು ಕೇಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಮಹತ್ವವೆನಿಸಿದೆ.

ಇಂದಿನ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸದಸ್ಯರು, ಅಧಿಕಾರಿಗಳು, ನೀರಾವರಿ ತಜ್ಞರು, ವಕೀಲರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿವಾದದ ಸಂಬಂಧ ಇದೇ ಸೆಪ್ಟೆಂಬರ್‌ 21ರಂದು ವಿಚಾರಣೆ ಇದೆ. ಈ ನಡುವೆ ನಡೆಯುತ್ತಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ.

Share Post