ದಲಿತರಿಗೆ ಸಚಿವರ ಧಮ್ಕಿ ವಿಚಾರ; ಕರೆದು ಮಾತಾಡ್ತೀನಿ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು; ಸಚಿವ ಡಿ.ಸುಧಾಕರ್ ಅವರು ಆಸ್ತಿ ವಿಚಾರದಲ್ಲಿ ನ್ಯಾಯ ಕೇಳಲು ಬಂದ ದಲಿತ ಕುಟುಂಬಕ್ಕೆ ಆವಾಜ್ ಹಾಕಿದ ವಿಡಿಯೋ ವೈರಲ್ ಆಗಿದ್ದು, ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಡಿ.ಸುಧಾಕರ್ ರಾಜೀನಾಮೆ ಪಡೆಯಬೇಕೆಂದು ಆಗ್ರಹ ಮಾಡಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಏನು ನಡೆದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸುಧಾಕರ್ ಅವರನ್ನು ಕರೆದು ಮಾತನಾಡುತ್ತೇನೆ. ಏನು ನಡೆದಿದೆ ಅನ್ನೋದನ್ನು ತಿಳಿದುಕೊಳ್ಳುತ್ತೇನೆ. ಅನಂತರ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.