ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಹಾಲು ಮಠದ ಸ್ವಾಮಿ ನಾಪತ್ತೆ
ವಿಜಯನಗರ; ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಿದ್ದಂತೆ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
ಈ ಕೇಸ್‌ನಲ್ಲಿ ಹಾಲಶ್ರೀ ಸ್ವಾಮೀಜಿ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಇದರಲ್ಲಿ ಹಾಲಶ್ರೀ ಸ್ವಾಮೀಜಿ ಆರೋಪಿ ನಂಬರ್ ೩ ಆಗಿದ್ದಾರೆ. ಯಾವಾಗ ಚೈತ್ರಾ ಕುಂದಾಪುರ ಬಂಧನವಾಯಿತೋ ಆಗಿನಿಂದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಮಠದಲ್ಲೂ ಕೂಡಾ ಅವರಿಲ್ಲ. ಒಂದು ಸಿಸಿಬಿ ಪೊಲೀಸರು ಹಾಲಶ್ರೀ ಸ್ವಾಮೀಜಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇತ್ತ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅವರು ಎಲ್ಲಿದ್ದಾರೆ ಅನ್ನೋದೇ ಗೊತ್ತಾಗುತ್ತಿಲ್ಲ. ಕೆಲವು ಮಾಹಿತಿಗಳ ಪ್ರಕಾರ ಶ್ರೀಗಳು ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.