ಮೈತ್ರಿ ಬಗ್ಗೆ ದೆಹಲಿಯಲ್ಲಿ ಚರ್ಚೆಯೇ ಆಗಲಿಲ್ಲ; ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಅವರು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಬಂದಿದ್ದಾರೆ. ಈ ಸಭೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚೆ ನಡೆಯುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಹೀಗಾಗಿಯೇ ಈ ಸಭೆ ಬಗ್ಗೆ ಕುತೂಹಲ ಹೆಚ್ಚಿತ್ತು. ಆದ್ರೆ, ಸಭೆಯಲ್ಲಿ ಈ ವಿಚಾರವೇ ಪ್ರಸ್ತಾಪವಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರೇ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ರಾಜ್ಯದ ಮಟ್ಟಿಗೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲುವುದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಆದ್ರೆ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಸಭೆಯಲ್ಲಂತೂ ರಾಜ್ಯ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದೆ ವರಿಷ್ಠರು ಯಾವ ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.