BengaluruCrime

ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ; ಆರೋಪಿ ಹಾಲಶ್ರೀಗೆ 10 ದಿನ ಸಿಸಿಬಿ ಕಸ್ಟಡಿ

ಬೆಂಗಳೂರು; ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿ. ಸ್ವಾಮೀಜಿ ಕೂಡಾ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ.

ಚೈತ್ರಾ ಕುಂದಾಪುರ ಸೇರಿ ಇತರ ಏಳು ಆರೋಪಿಗಳನ್ನು ಕೆಲ ದಿನಗಳ ಹಿಂದೆಯೇ ಬಂಧಿಸಲಾಗಿತ್ತು. ಆದ್ರೆ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿತ್ತು. ವೇಷ ಬದಲಿಸಿಕೊಂಡು ಓಡಾಡುತ್ತಿದ್ದರು. ನಿನ್ನೆ ಕಟಕ್‌ನಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಲಶ್ರೀಯನ್ನು ಬಂಧಿಸಲಾಗಿತ್ತು. ಬೆಂಗಳೂರಿಗೆ ಕರೆತಂದು ಪೊಲೀಸರು ಇಂದು ಕೋರ್ಟ್‌ ಮುಂದೆ ಹಾಜರುಪಡಿಸಿದ್ದರು. ಕೋರ್ಟ್‌ ಶ್ರೀಗಳಿಗೆ ಹತ್ತು ದಿನಗಳ ಸಿಸಿಬಿ ಕಸ್ಟಡಿ ವಿಧಿಸಿದೆ.

 

Share Post