International

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆ ಪ್ರಕರಣ; ಉಲ್ಟಾ ಹೊಡೆಯುತ್ತಿದ್ದಾರೆ ಕೆನಡಾ ಪ್ರಧಾನಿ

ಒಟ್ಟಾವಾ; ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಗಂಭೀರ ಆರೋಪ ಮಾಡಿದ್ದರು. ಈ ವಿಚಾರ ಪ್ರಪಂಚದಾದ್ಯಂತ ಸದ್ದು ಮಾಡುತ್ತಿದ್ದಂತೆ ಅವರು ವರಸೆ ಬದಲಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೂಡಾ ಅವರು ನೀಡಿದ್ದಾರೆ. ನಾವು ಭಾರತ ದೇಶವನ್ನು ಪ್ರಚೋದಿಸುತ್ತಿಲ್ಲ. ಆದ್ರೆ ನಾವು ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾ

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನಾವು ಭಾರತವನ್ನು ಪ್ರಚೋದಿಸುವ ಕೆಲಸ ಮಾಡುತ್ತಿಲ್ಲ. ಅಥವಾ ಈ ವಿಚಾರವನ್ನು ಮುಂದುವರೆಸಲೂ ಬಯಸುತ್ತಿಲ್ಲ. ಆದ್ರೆ ಭಾರತ ಸರ್ಕಾರವನ್ನು ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಹೇಳಿದ್ದಾರೆ.  ಜೂನ್ 18 ರಂದು ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಗುಂಡು ಹಾರಿಸಲಾಗಿತ್ತು. ಇದರ ಹಿಂದೆ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಗಂಭೀರ ಆರೋಪ ಮಾಡಿದ್ದರು.

Share Post