ತಮಿಳುನಾಡಿಗೆ ನೀರು ಬಿಡಲು ಆದೇಶ ಹಿನ್ನೆಲೆ; ಹಳೇ ಮೈಸೂರು ಭಾಗದಲ್ಲಿ ಜೋರಾಯ್ತು ಹೋರಾಟ
ಬೆಂಗಳೂರು; ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಹೀಗಿದ್ದರೂ, ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಹೋರಾಟಕ್ಕಿಳಿದಿವೆ.
ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ಶುರುವಾಗಿವೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ಶುರುವಾಗಿದೆ. ಇನ್ನೊಂದೆಡೆ ಮಂಡ್ಯದಲ್ಲೂ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಗಳು ವ್ಯಕ್ತವಾಗುತ್ತಿವೆ.