Districts

ಜೋರಾಯ್ತು ಕಾವೇರಿ ಹೋರಾಟ; ಮಂಡ್ಯ ಬಂದ್‌, ವಾಹನ ಸವಾರರ ಪರದಾಟ

ಮಂಡ್ಯ; ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಹಾಗೂ ರೈತ ಹಿತರಕ್ಷಣಾ ಸಮಿತಿ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಜನರು ಸ್ವಯಂ ಪ್ರೇರಿತರಾಗಿ ಬೆಂಬಲ ಸೂಚಿಸಿದ್ದಾರೆ. ಮಂಡ್ಯ ನಗರವಲ್ಲದೆ ಮದ್ದೂರಿನಲ್ಲೂ ಪ್ರತಿಭಟನೆ ನಡೆಯುತ್ತಿದೆ. 

ಮಂಡ್ಯ ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲಾಗುತ್ತಿದೆ.

ಇನ್ನು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಕೂಡಾ ಪ್ರತಿಭಟನೆ ನಡೆಯುತ್ತಿದೆ.

 

 

Share Post