ಮಗುವಿನ ನಿರೀಕ್ಷೆಯಲ್ಲಿ ಅಮೂಲ್ಯ ದಂಪತಿ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಜಗದೀಶ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.
ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅಮೂಲ್ಯ ಅವರೇ ತಮ್ಮ ಇನ್ಸ್ಟಾ ಅಕೌಂಟ್ ಅಲ್ಲಿ ಹಂಚಿಕೊಂಡಿದ್ದಾರೆ. ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.