ಬೆಂಗಳೂರು ಬಂದ್; ಕುರುಬೂರು ಶಾಂತಕುಮಾರ್ ಸೇರಿ 20 ಮಂದಿ ವಶಕ್ಕೆ
ಬೆಂಗಳೂರು; ಇಂದು ಬೆಂಗಳೂರು ನಗರ ಬಂದ್‌ಗೆ ಕರೆ ನೀಡಲಾಗಿದೆ. ಆದ್ರೆ ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಇಂದು ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆಯೂ ಇಂದು ಪ್ರತಿಭಟನೆಗಳು ಮುಂದುವರೆದಿವೆ. ಇನ್ನು ಇಂದು ಬೆಳಗ್ಗೆಯೇ ಬಂದ್ ನೇತೃತ್ವ ವಹಿಸಿರುವ ಕುರುಬೂರು ಶಾಂತಕುಮಾರ್ ಹಾಗೂ ಒಂದಷ್ಟು ರೈತ ಮುಖಂಡರು ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು, ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮೊದಲ ಮಾತನಾಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರು, ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಕಾವೇರಿಗಾಗಿ ನಾವು ಹೋರಾಟ ಮಾಡುತ್ತಿದ್ದರೆ, ಅದನ್ನು ಹತ್ತಿಕ್ಕಲು ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಹೀಗೆ ಮಾಡಬಾರದಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರ ನೀರಗಂಟಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.