ಮಾಜಿ ಸಿಎಂ ವೀರೇಂದ್ರ ಪಾಟೀಲ್ ಪತ್ನಿ ಶಾರದಾ ಪಾಟೀಲ್ ನಿಧನ
ಬೆಂಗಳೂರು; ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ್ ಅವರು ಇಂದು ನಿಧನರಾಗಿದ್ದಾರೆ. 93 ವರ್ಷದ ಶಾರದಾ ಪಾಟೀಲ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಬೆಂಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಮೃತರು ಮಗ ಹಾಗೂ ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಚಿಂಚೋಳಿ ಮೂಲದವರಾಗಿದ್ದು, ವೀರೇಂದ್ರ ಪಾಟೀಲರ ಸಮಾಧಿ ಕೂಡಾ ಅಲ್ಲೇ ಇದೆ. ಹೀಗಾಗಿ ಚಿಂಚೋಳಿಯ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.
ಇಂದು ಪಾರ್ಥಿವ ಶರೀರವನ್ನು ಚಿಂಚೋಳಿಗೆ ಕರೆದುಕೊಂಡು ಹೋಗಲಾಗುತ್ತದೆ. ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಅವರ ಪುತ್ರ ಕೈಲಾಸನಾಥ ಪಾಟೀಲ್ ಅವರು ಹೇಳಿದ್ದಾರೆ.