ಬಿಜಗುಪ್ಪಿ ಬಳಿ ಪಲ್ಟಿ ಹೊಡೆದ ಸರ್ಕಾರಿ ಬಸ್; 20ಕ್ಕೂ ಹೆಚ್ಚು ಜನರಿಗೆ ಗಾಯ
ಬೆಳಗಾವಿ; ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ಬಳಿಯ ಬಿಜಗುಪ್ಪಿಯಲ್ಲಿ ಈ ದುರ್ಘಟನೆ ನಡೆದಿದೆ.
ಹುಲಕುಂದ ಗ್ರಾಮದಿಂದ ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ನ ಫಾಟಾ ಕಟ್ ಆಗಿ ಈ ದುರ್ಘಟನೆ ನಡೆದಿದೆ. ಮರಕ್ಕೆ ಬಸ್ ಡಿಕ್ಕಿ ಹೊಡೆದು ನೆಲಕ್ಕುರುಳಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ತೆರಳುತ್ತಿದ್ದರು. ಇದರಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನು ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.