ಮಹದೇಶ್ವರ ಸನ್ನಿಧಿಯಲ್ಲಿ ಬೃಹತ್ ಸಾಮೂಹಿಕ ವಿವಾಹ; ಸಿಎಂ ಸಿದ್ದರಾಮಯ್ಯ ಭಾಗಿ
ಚಾಮರಾಜನಗರ; ಮಹದೇಶ್ವರ ಸನ್ನಿಧಿಯಲ್ಲಿ ಶ್ರೀ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ನವ ವಧು-ವರರಿಗೆ ಮಂಗಲ ಸೂತ್ರ ವಿತರಿಸುವ ಮೂಲಕ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಂಗಳವಾರ ರಾತ್ರಿಯೇ ಆಗಮಿಸಿ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಳಗ್ಗೆ ಮಹದೇಶ್ವರ ದರ್ಶನ ಪಡೆದು ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ವಧು ವರರಿಗೆ ಮಂಗಲ ಸೂತ್ರ ವಿತರಿಸಿ ಆಶಿರ್ವದಿಸಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿ, ಸಾಲೂರು ಮಠಾಧಿಪತಿ ಶಾಂತಮಲ್ಲಿಕಾರ್ಜುನಸ್ವಾಮಿ ಸಮ್ಮುಖದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ಆರ್ ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪನಾಗ್, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.