ನಾಳೆ ಕರ್ನಾಟಕ ಬಂದ್ ಹಿನ್ನೆಲೆ; ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ
ಬೆಂಗಳೂರು; ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ನೂರಾರು ಸಂಘಟನೆಗಳು ಇದಕ್ಕೆ ಬೆಂಬಲ ಘೋಷಿಸಿವೆ. ಕಾವೇರಿಗಾಗಿ ನಾಳೆ ಬೆಳಗ್ಗೆ ಹತ್ತು ಗಂಟೆಗೆ ಟೌನ್‌ಹಾಲ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ನಂತರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಈ ಬೆನ್ನಲ್ಲೇ ಬಂದ್ ಮಾಡಬಾರದು ಅಂತ ಸುಪ್ರೀಂ ಕೋರ್ಟೇ ಹೇಳಿದೆ ಅಂತ ಸರ್ಕಾರ ಹೇಳುತ್ತಿದೆ. ಇತ್ತ ಪೊಲೀಸರು ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು ಮಧ್ಯಾರಾತ್ರಿ 12 ಗಂಟೆಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ನಾಳೆ ದಿನವಿಡೀ ಇದು ಜಾರಿಯಲ್ಲಿರುತ್ತೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ, ಈ ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಾಳೆ ಕೂಡಾ ಬೆಂಗಳೂರಿನಲ್ಲಿ ಪ್ರತಿಭಟನೆ, ರ್ಯಾಲಿ ಮತ್ತು ಮೆರವಣಿಗೆ ಇತ್ಯಾದಿಗೆ ಅವಕಾಶ ನೀಡಿಲ್ಲ. ಇದಕ್ಕೆ ನಿಷೇಧವಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ, ಯಾವುದೇ ಸಂಘಟನೆ, ಪಾರ್ಟಿ ಬಂದ್‌ಗೆ ಕರೆ ನೀಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದಾಗ ಯಾವುದೇ ನಷ್ಟ ಅಥವಾ ಆಸ್ತಿಪಾಸ್ತಿಗೆ ಧಕ್ಕೆಯಾದರೆ ಅದರ ಹೊಣೆ ಬಂದ್‌ಗೆ ಕರೆ ನೀಡಿದವರೇ ಹೊರಬೇಕಾಗುತ್ತದೆ ಎಂದು ದಯಾನಂದ್ ಅವರು ಹೇಳಿದ್ದಾರೆ.
ನಾಳೆ ಬೆಂಗಳೂರು ನಗರದಲ್ಲಿ ಕೆಎಸ್ಆರ್ಪಿ, ಹೋಮ್ ಗಾರ್ಡ್ , ಆರ್ಎಎಫ್ ಅವರನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಇತ್ತ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಎಲ್ಲಾ ಎಸ್‌ಪಿ ಮತ್ತು ಡಿಸಿಪಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ನಾಳೆ ಯಾವುದೇ ಕಾರಣಕ್ಕೂ ಬಲವಂತವಾಗಿ ಬಂದ್ ಮಾಡುಸುವಂತಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ.