Bengaluru

karnataka Bandh; ದೇವನಹಳ್ಳಿ ವಿಮಾನ ನಿಲ್ದಾಣ ಮುತ್ತಿಗೆ ಯತ್ನ

 

ಬೆಂಗಳೂರು; ಇಂದು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹೋರಾಟಗಳು ಜೋರಾಗಿವೆ. ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ರಾಜ್ಯ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಸ್ತೆಗಳೆಲ್ಲಾ ಬಿಕೋ ಎನ್ನುತ್ತಿವೆ. ವಾಹನಗಳು ರಸ್ತೆಗಿದಿಲ್ಲ. ಇನ್ನೊಂದೆಡೆ ಬೆಳಗ್ಗೆಯಿಂದಲೇ ಪ್ರತಿಭಟನಾಕಾರರು ಆಕ್ರೋಶಗಳನ್ನು ಹೊರಹಾಕುತ್ತಿದ್ದಾರೆ.
ಕರವೇ ಕಾರ್ಯಕರ್ತರು ಬೆಳಗ್ಗೆಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ. ಕೂಡಲೇ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ, ಬೇರೆಡೆಗೆ ಕರೆದೊಯ್ದಿದ್ದಾರೆ.

Share Post