ಜನಪ್ರತಿನಿಧಿ ಮೇಲೆ ಈ ರೀತಿ ಕೊಲೆ ಹಂತಕ್ಕೆ ಇಳಿದಿದ್ದು ಭಯ ತರಿಸಿದೆ: ಬಿ.ವೈ ವಿಜಯೇಂದ್ರ
ಮೈಸೂರು: ಓರ್ವ ಜನಪ್ರತಿನಿಧಿ ಮೇಲೆ ಈ ರೀತಿ ಕೊಲೆ ಹಂತಕ್ಕೆ ಇಳಿದಿರುವುದು ಭಯ ತರಿಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಯಲಹಂಕ ಶಾಸಕ ಎಸ್. ಆರ್ ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಅಕ್ಕಪಕ್ಕದ ರಾಜ್ಯದಲ್ಲಿ ಈ ರೀತಿ ವಾತಾವರಣ ಇತ್ತು. ವಿಶ್ವನಾಥ್ ಒಬ್ಬ ಪ್ರಭಾವಿ ರಾಜಕಾರಣಿ ಸಾಕಷ್ಟು ಬಾರಿ ಗೆಲುವು ಸಾಧಿಸಿದ್ದಾರೆ. ಇದು ಭಯ ಸೃಷ್ಟಿ ಮಾಡುವಂತಹ ಘಟನೆ. ಬಿಜೆಪಿ ಪಕ್ಷ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.