Bengaluru

ಅಕ್ಟೋಬರ್‌ 10ರವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು; ರಾಜ್ಯದಲ್ಲಿ ಅಕ್ಟೋಬರ್‌ 10ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಇನ್ನು ಆರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆಯಂತೆ.

ಈ ದಿನಗಳಲ್ಲಿ ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿರಲಿದ್ದು ಸಂಜೆಯ ವೇಳೆ ಮೋಡ ಕವಿದ ವಾತಾವರಣವಿರುತ್ತದೆ. ಆಗ ಮಳೆ ಕೂಡಾ ಸುರಿಯುತ್ತದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Share Post