ಕಾವಾಡಿಗರಹಟ್ಟಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ಕುಟುಂಬದ ಒಬ್ಬರಿಗೆ ಉದ್ಯೋಗ ಭರವಸೆ
ಚಿತ್ರದುರ್ಗ; ಕಲುಷಿತ ನೀರು ಸೇವಿಸಿ ಕಾವಾಡಿಗರಹಟ್ಟಿಯಲ್ಲಿ 6 ಜನ ಮೃತಪಟ್ಟಿದ್ದರು. ಮೂಲ ಸೌಕರ್ಯ ವಂಚಿತ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಸೌಲಭ್ಯ ಒದಗಿಸುವಂತೆ ಜನ ಆಗ್ರಹ ಮಾಡಿದ್ದರು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದ್ದಾರೆ.
ಇದೇ ವೇಳೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಮೃತರ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳುತ್ತೆ. ಕಾವಾಡಿಗರಹಟ್ಟಿ ಬಡಾವಣೆ ಅಭಿವೃದ್ಧಿಗೆ 4 ಕೋಟಿ ರೂಪಾಯಿ ಅನುದಾನ ನೀಡಲಿದ್ದೇವೆ, ಜೊತೆಗೆ ಇಲ್ಲಿನ ನಿವಾಸಿಗಳಿಗೆ 3 ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.