NationalPolitics

ಇಂದು ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ನವದೆಹಲಿ; ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಇಂದು (ಸೋಮವಾರ) ಬಿಡುಗಡೆಯಾಗಲಿದೆ.

ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.

ಇಸಿಐ ಜಂಟಿ ನಿರ್ದೇಶಕ ಅನುಜ್ ಚಂದಕ್ ಅವರು ತೆಲಂಗಾಣ ಜೊತೆಗೆ ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

 

Share Post